ಸಂಗೀತ ಕಾರ್ಯಾಗಾರ

Published on

ಹುಬ್ಬಳ್ಳಿ: ಇಲ್ಲಿಯ ಎಸ್ ಜೆಎಂವಿಎಸ್ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಡಾ. ಮೂಜಗಂ ಸಭಾಭವನದಲ್ಲಿ ಐಕ್ಯೂಎಸಿ, ಸಂಗೀತ ವಿಭಾಗ ಹಾಗೂ ಅನ್ನರ್ಪೂಣದೇವಿ ಫೌಂಡೇಷನ್ ಸಹಯೋಗದಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಾರರು ಮತ್ತು ಅಪೂರ್ವಗುರು ಅನ್ನಪೂರ್ಣದೇವಿ ಅವರ ಜೀವನದ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು 23ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಶ್ರೀಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಂಬೈನ ಅಂತಾರಾಷ್ಟ್ರೀಯ ಕೊಳಲು ವಾದಕ ಪಂ. ನಿತ್ಯಾನಂದ ಹಲ್ದಿಪುರ ಕಾರ್ಯಕ್ರಮ ಉದ್ಘಾಟಿಸುವರು.

ಎಸ್ಜೆಎಂವಿ ಸಂಘದ ಗೌರವ ಕಾರ್ಯಾಧ್ಯಕ್ಷ ಅರವಿಂದ ಕುಬಸದ ಅಧ್ಯಕ್ಷತೆ ವಹಿಸುವರು. ಸಂಜೆ 4ಕ್ಕೆ ಸಮಾರೋಪ ಜರುಗಲಿದೆ ಎಂದು ಪ್ರಾಚಾರ್ಯ ಡಾ. ಸಿಸಿಲಿಯಾ ಡಿ'ಕ್ರೂಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net