ಸಂಗೀತ ಕಾರ್ಯಕ್ರಮ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಕಲಾ ಮಂಟಪವು ಸೆ. 27ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಭವನದಲ್ಲಿ ಅಥಣಿಯ ಶಾಸ್ತ್ರೀಯ ಸಂಗೀತಗಾರ ನಿಜಗುಣ ಮಂಗಿ ಅವರಿಂದ ಶಾಸ್ತ್ರೀಯ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಿದೆ. ಸಂಗೀತಗಾರ ಹನುಮಂತ ಬುರ್ಲಿ ಅತಿಥಿಯಾಗಿ ಆಗಮಿಸುವರು. ಕರ್ನಾಟ ಸಂಗೀತ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಶಾಂತಾರಾಮ ಹೆಗಡೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net