ಸೋತವರಿಗೂ ಸಚಿವ ಸ್ಥಾನ ನೀಡಲಿ: ಅನರ್ಹಗೊಂಡ ಶಾಸಕ ಪ್ರತಾಪಗೌಡ ಪಾಟೀಲ್ ಒತ್ತಾಯ

02022020 Maski Pratapgowda Patil
Published on

ಮಸ್ಕಿ: ಎರಡ್ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಬಿ.ಎಸ್.ಯಡಿಯೂರಪ್ಪ ಸರ್ಕಾರ 3 ವರ್ಷ ಪೂರ್ಣ ಗೊಳಿಸುತ್ತದೆ ಎಂದು ಅನರ್ಹಗೊಂಡ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದರು. ಬಿಎಸ್‌ವೈ ಮೂರು ಸ್ಥಾನಗಳನ್ನು ಬಿಟ್ಟು ಸಚಿವ ಸಂಪುಟ ವಿಸ್ತರಿಸಲಿದ್ದಾರೆ. ನಾವು 17 ಜನರು ಒಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಒಡಕಿಲ್ಲ, ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸವ್ಯಕ್ತ ಪಡಿಸಿದರು.

ಸೋತವರಿಗೂ ಸಚಿವ ಸ್ಥಾನ ನೀಡಬೇಕು. ಆದರೆ, ವಿಶ್ವನಾಥರಿಗೆ ಚುನಾವಣೆ ಸ್ಪರ್ಧಿಸಬಾರದೆಂದು ಮೊದಲೇ ಹೇಳಿದ್ದರು. ಮುಂದಿನ ದಿನಗಳಲ್ಲಿ ವಿಧಾನ ಪರಿಷತ್ ಸ್ಥಾನ ಖಾಲಿಯಾದಾಗ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net