ನಾನು ಬಿಜೆಪಿ ತ್ಯಜಿಸುವ ಪ್ರಶ್ನೆಯೇ ಇಲ್ಲ

17-msk-1
Published on

ಮಸ್ಕಿ: ಸುರಪೂರ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಜ.19ರಂದು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮಸ್ಕಿ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುವ ಕಾರ್ಯಕರ್ತರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಜಯ ಸಂಕಲ್ಪ ದಿವಸ ನಿಮಿತ್ತ ಜ.21ರಂದು ಕ್ಷೇತ್ರದಲ್ಲಿ 1 ಲಕ್ಷ ಕಾರ್ಯಕರ್ತರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. 8000090009 ನಂಬರ್ ಗೆ ಮಿಸ್ಡ್ ಕಾಲ್ ಮೂಲಕ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದೆ ಎಂದರು.

ಜ.29 ರಂದು ನಡೆಯುವ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ವೀಕ್ಷಣೆಗೆ ಕ್ಷೇತ್ರದ 231 ಬೂತ್‌ಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದ್ದು, ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ, ನಾನು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬರಲು ಸಾಧ್ಯವಾಯಿತು. ನನ್ನ ಬಗ್ಗೆ ಕೆಲವರು ಸುಳ್ಳು ಸುದ್ದಿಗಳನ್ನು ಹರಿ ಬಿಡುತ್ತಿದ್ದು, ವದಂತಿಗಳಿಗೆ ಕಾರ್ಯಕರ್ತರು ಕಿವಿ ಕೊಡಬಾರದು ಎಂದರು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಶರಣಬಸವ ವಕೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net