ಸಂಜೆ 7ರವರೆಗೆ ಮತದಾನಕ್ಕೆ ಅವಕಾಶ, ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

30032021 Maski byelection campein
Published on

ಮಸ್ಕಿ: ಏ.17 ರಂದು ನಡೆಯುವ ಉಪ ಚುನಾವಣೆಗೆ ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಲು ಮತದಾನದ ಅರಿವು ಮೂಡಿಸುವ ಜಾಗೃತಿ ಜಾಥಾಕ್ಕೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಚುನಾವಣಾಧಿಕಾರಿಯೂ ಆದ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಚಾಲನೆ ನೀಡಿದರು.

ಈ ಬಾರಿ ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಮತದಾನಕ್ಕೆ ಅವಕಾಶವಿದೆ. ಅಂಗವಿಕಲರು, ಕರೊನಾ ಸೋಂಕಿತರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಪೋಸ್ಟಲ್ ಬ್ಯಾಲೆಟ್ ಮತದಾನ ಮಾಡಲು ಸರ್ಕಾರ ಅವಕಾಶ ನೀಡಿದೆ ಎಂದರು.

ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಗಳು, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net