ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

muslim
Published on

ಕುಶಾಲನಗರ:

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಕರೀಂ ಮಾತನಾಡಿ ವಕ್ಫ್ ಆಸ್ತಿ ನಮ್ಮ ಹಿರಿಕರು ನಮಗೆ ನೀಡಿದ ಬಳುವಳಿ. ಇದನ್ನು ಯಾರಿಗೂ ಕಸಿದುಕೊಳ್ಳಲು ನಾವು ಬೀಡುವುದಿಲ್ಲ. ಕೇಂದ್ರದ ಮೋದಿ ಸರ್ಕಾರದ ವಂಚನೆಯ ಭಾಗವಾಗಿ ಮುಸಲ್ಮಾನರ ವಕ್ಫ್ ಆಸ್ತಿ ಕಬಳಿಸುವ ಅಪಾಯಕಾರಿ ಕಾನೂನು ಜಾರಿಗೆ ತರುವ ಹುನ್ನಾರವನ್ನು ನಡೆಸುತ್ತಿದ್ದು, ಈ ರೀತಿಯ ಕೇಂದ್ರ ಸರ್ಕಾರದ ದ್ವಿಮುಖ ಧೋರಣೆಯನ್ನು ಖಂಡಿಸುವ ಮೂಲಕ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.

ಎಜುಕೇಶನ್ ಟ್ರಸ್ಟ್ ಸದಸ್ಯÀ ಹನೀಫ್ ಮಾತನಾಡಿ ಕೇಂದ್ರ ಸರ್ಕಾರದ ಈ ರೀತಿಯ ವರ್ತನೆಯನ್ನು ನಾವು ಬಲವಾಗಿ ಖಂಡಿಸುವ ಮೂಲಕ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ಗ್ರಾಮ ಮಟ್ಟದಿಂದ ಹೋರಾಟ ನಡೆಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಎಂ.ಎಸ್. ಜಮೀರ್, ಏಳನೇ ಹೊಸಕೋಟೆ ರಜಾಕ್, ರಿಜ್ವಾನ್, ಶಮ್ಮಿ, ಉಶ್ಮಾನ್, ಇಬ್ರಾಹಿಂ, ಅಮಾನುಲ್ಲಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net