19ರಿಂದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ

Published on

ಗೋಣಿಕೊಪ್ಪ: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ 15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್ ಹೊನಲು ಬೆಳಕಿನ ಪಂದ್ಯಾವಳಿ ಮುಸ್ಲಿಂ ಕಪ್ ವಾಲಿಬಾಲ್-2024 ಜ.19 ರಿಂದ 21ರವರೆಗೆ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಲಿದೆ.

ಒಟ್ಟು 3 ದಿನಗಳವರೆಗೆ ನಡೆಯಲಿರುವ ಈ ಪಂದ್ಯಾವಳಿಯ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷರಾದ ಪಿ.ಎ.ಹನೀಫ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಈ ಪಂದ್ಯಾವಳಿಯನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು ಅಗತ್ಯ ಏರ್ಪಾಡುಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯ ದಾನಿಗಳ ಮತ್ತು ಕ್ರೀಡಾಪ್ರೇಮಿಗಳ ಆರ್ಥಿಕ ನೆರವಿನಿಂದ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಗೆ ಈಗಾಗಲೇ 30 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ ಎಂದರು.

ಜ.19ರಂದು ಸಂಜೆ 4 ಗಂಟೆಗೆ ನಡೆಯುವ ಪಂದ್ಯಾವಳಿಯನ್ನು ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಎಂ.ಎಚ್.ಅಬ್ದುಲ್ ರಹಿಮಾನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಡಿ.ಎಚ್.ಸೂಫಿ ಹಾಜಿ, ಕೊಡಗು ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷ ಪಿ.ಎಂ.ಹಕೀಮ್, ಮಡಿಕೇರಿಯ ವಕೀಲರಾದ ಕೆ.ಎಂ.ಕುಂಜಬ್ದುಲ್ಲ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜ.21 ರಂದು ಸಂಜೆ 7 ಗಂಟೆಗೆ ನಡೆಯುವ ಪಂದ್ಯಾವಳಿಯ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್‌ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೈಸೂರಿನ ಲಕ್ಷ್ಮಣ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪದಾಧಿಕಾರಿಗಳಾದ ಕರೀಂ ಕಡಂಗ, ಮೊಹಮ್ಮದ್ ರಾಫಿ, ಕೋಳುಮಂಡ ರಫೀಕ್, ಅಬ್ದುಲ್ ರಹಿಮಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net