ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗಿಲ್ಲ ಅವಕಾಶ

kseee (4)
Published on

ಶಿವಮೊಗ್ಗ: ರಾಜ್ಯದಲ್ಲಿ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಸ್ಥಾಪಿಸುವುದಕ್ಕೆ ಅವಕಾಶವಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಹಿಳಾ ಕಾಲೇಜು ಸ್ಥಾಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಸಂಬಂಧ ಸಿಎಂ ಹೇಳಿದ್ದನ್ನು ನಂಬಬೇಕೋ ಅಥವಾ ಅಟೆಂಡರ್ ಹೇಳಿದ್ದನ್ನು ನಂಬಬೇಕೋ ಎಂದು ಪ್ರಶ್ನಿಸಿದರು.

ಯಾರು ಏನೇ ಹೇಳಿದರೂ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೆ ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಸ್ಥಾಪಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net