ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು

h11-Ramzan 3
Published on

ಹುಬ್ಬಳ್ಳಿ: ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಮರು ಇಲ್ಲಿಯ ಕಿತ್ತೂರ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗುರುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೌಲಾಜ ಜಹೀರುದ್ದೀನ ಖಾಜಿ ನೇತೃತ್ವದಲ್ಲಿ , ದೇಶಾದ್ಯಂತ ಶಾಂತಿ ನೆಲೆಸುವುದಲ್ಲದೇ, ಸಮೃದ್ಧಿಯಿಂದ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಕುರಾನ್ ಪಠಣ ನಂತರ ಪ್ರಾರ್ಥನೆ ಮುಗಿಸಿ ಹೊರಬಂದ ಮುಸ್ಲಿಮರು, ಪರಸ್ಪರ ಶುಭಾಶಯ ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ, ಅಂಜುಮನ್ ಅಧ್ಯಕ್ಷ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಪ್ರಮುಖರಾದ ಅಲ್ತಾಫ ಹಳ್ಳೂರ, ಮಹ್ಮದ್ ಯುಸೂಫ್ ಸವಣೂರ, ದಾದಾ ಹಯಾತ್ ಖೈರಾತಿ, ಶಿರಾಜ ಅಹ್ಮದ್ ಕುಡಚಿವಾಲೆ, ಅನ್ವರ ಮುಧೋಳ, ಸದಾನಂದ ಡಂಗನವರ, ಮಹೇಂದ್ರ ಸಿಂಘಿ, ಕಾಂಗ್ರೆಸ್‌ನ ಧಾರವಾಡ ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿ ಇತರರು ಉಪಸ್ಥಿತರಿದ್ದರು.
ಮಾರ್ಗ ಬದಲಾವಣೆ: ರಂಜಾನ್ ಹಬ್ಬದ ನಿಮಿತ್ತ ಚನ್ನಮ್ಮ ವೃತ್ತದಲ್ಲಿ ಜನಸಂದಣಿ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಆಯುಕ್ತಾಲಯದಿಂದ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ಇದರಿಂದ ಕೆಲಹೊತ್ತು ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net