ಕುರುಬರನ್ನು ಪ.ಪಂಗಡಕ್ಕೆ ಸೇರಿಸಿ

7 vikram 10
Published on

ಧಾರವಾಡ: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರ ಶುಕ್ರವಾರ ಪ್ರತಿಭಟನೆ ನಡೆಯಿತು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ಇಡುವುದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸಲು ಸಹಕರಿಸಿದ ಎಚ್. ವಿಶ್ವನಾಥ, ಎಂ.ಟಿ.ಬಿ. ನಾಗರಾಜ ಹಾಗೂ ಆರ್.ಶಂಕರ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಕತ್ತೆಗಳನ್ನು ಕರೆತಂದು ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು. ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಪತ್ರ ರವಾನಿಸಿದರು. ಪ್ರತಿಷ್ಠಾನದ ಅಧ್ಯಕ್ಷ ರವಿರಾಜ ಕಂಬಳಿ, ಕಾಶಪ್ಪ ಬದಾಮಿ, ನಿಂಗಪ್ಪ ಜ್ಯೋತಿನಾಯ್ಕರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net