ಕ್ರೀಡಾ ಮನೋಭಾವದೊಂದಿಗೆ ಭಾಗವಹಿಸಬೇಕು

blm (4)
Published on

ಕಾರ್ಕಳ: ಮಕ್ಕಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಗೆ ಹೆಸರು ತರುವಂತಹ ಕೆಲಸ ವಾಡಬೇಕು ಎಂದು ಕಾರ್ಕಳದ ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಅವಿನಾಶ್ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗ ಹಾಗೂ ಕಾರ್ಕಳ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗಗಳ ುಟ್ಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಕ್ರೈಸ್ಟ್‌ಕಿಂಗ್ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಅಧ್ಯಕ್ಷತೆ ವಹಿಸಿ ವಾತನಾಡಿ ಕ್ರೀಡೆಯಲ್ಲಿ ಭಾಗವಹಿಸುವುದೇ ಒಂದು ಹಂತದ ಗೆಲುವು ಪಡೆದ ಹಾಗೆ, ಎಲ್ಲ ಸ್ಪರ್ಧಾಳುಗಳು ಒಬ್ಬರಿಗೊಬ್ಬರು ಸ್ಫೂರ್ತಿಯಾಗುವಂತೆ ಸ್ಪರ್ಧಿಸಬೇಕು ಎಂದರು.

ಪುರಸಭಾ ಸದಸ್ಯ ಶುಭದ್ ರಾವ್, ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ವಲಯ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂ ಅಧ್ಯಕ್ಷ ಸಂತೋಷ್ ಶೆಟ್ಟಿ, ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಶಿಕ್ಷಕರಕ್ಷಕ ಸಂಘ ಅಧ್ಯಕ್ಷ ಪ್ರೌಢಶಾಲಾ ವಿಭಾಗದ ಶರಿಟಾ ನೊರೊನ್ಹ, ಪ್ರಾಥಮಿಕ ವಿಭಾಗದ ಉದಯ ರವಿ ಉಪಸ್ಥಿತರಿದ್ದರು.

ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ನಾಯ್ಕ ಸ್ವಾಗತಿಸಿದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಜೆಸ್ಲಿನ್ ಡಿಸೋಜ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net