ಮುತ್ತಿನಕೊಪ್ಪಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್

21 nrp 2 (1)
Published on

ಎನ್.ಆರ್.ಪುರ: ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡಲು ಮೊದಲ ಆದ್ಯತೆ ನೀಡಲಾಗುವುದು ಎಂದು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.

ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಕ,ಬಾಲಕಿಯರ ಹೈಟೆಕ್ ಶೌಚಗೃಹ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಆದರೆ ಸರ್ಕಾರದಿಂದ ಹೆಚ್ಚಿನ ಅನುದಾನ ಬರುತ್ತದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುವಂತೆ ಪಾಲಕರು, ಶಿಕ್ಷಕರು ಶ್ರಮಿಸಬೇಕು. ಸರ್ಕಾರಿ ಶಾಲೆ ಉಳಿಸುವ ಜವಾಬ್ದಾರಿ ಗ್ರಾಮಸ್ಥರ ಮೇಲಿದೆ ಎಂದರು.

ಕೆಲವು ವರ್ಷಗಳ ಹಿಂದೆ ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಪ್ರಯತ್ನ ನಡೆದಿತ್ತು. ದೇಶ ಅಭಿವೃದ್ಧಿಯಾಗ ಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣ ಕಲಿಯಬೇಕು. ವೇಗವಾಗಿ ಬೆಳೆಯುತ್ತಿರುವ ಇಂದಿನ ತಂತ್ರಜ್ಞಾನವನ್ನು ಎಲ್ಲ ಮಕ್ಕಳು ಕಲಿಯಬೇಕು. ಎಲ್ಲ ಮಕ್ಕಳು ವಿದ್ಯಾವಂತರಾಗಬೇಕು ಎಂದರು.

ಮುತ್ತಿನಕೊಪ್ಪ ಗ್ರಾಪಂ ಉಪಾಧ್ಯಕ್ಷ ನರೇಂದ್ರ, ಗ್ರಾಪಂ ಸದಸ್ಯ ಯಾಜ್, ಬಿಇಒ ಕೆ.ಆರ್.ಪುಷ್ಪಾ, ಸಹ ಶಿಕ್ಷಕ ನಾಗೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net