

ಮಧುಗಿರಿ: ನಮ್ಮಸರ್ಕಾರ ಕನ್ನಡದ ಪರವಾಗಿದೆ, ಕನ್ನಡಿಗರ ಬೆಳವಣಿಗೆಗೆ, ಕನ್ನಡ ಆಡಳಿತ ಭಾಷೆಗೆ ಒತ್ತು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪಟ್ಟಣದ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಹಾಗೂ ಕನ್ನಡ ಭವನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, 25 ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದ ಕನ್ನಡ ಭವನ ನಿರ್ಮಾಣ ಕಾರ್ಯ ಈಗ ಪೂರ್ಣಗೊಂಡಿದೆ. ರಾಜಣ್ಣ 3 ತಿಂಗಳಲ್ಲೇ 156 ಕೋಟಿ ರೂ., ಅನುದಾನ ತಂದಿದ್ದಾನೆ ಎಂದರು.
ನಮ್ಮ ಸರ್ಕಾರವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ. ನುಡಿದಂತೆ ನಡೆಯುತ್ತೇವೆ. ಬಸವಾದಿ ಶರಣರ ಮಾರ್ಗದಲ್ಲಿ ನಡೆದಿದ್ದೇವೆ. ಕೊಟ್ಟ ಮಾತಿಗೆ ತಪ್ಪಿ ನಡೆಯುವುದಿಲ್ಲ ಎಂದು ತಿಳಿಸಿದರು.