ಮೈಷುಗರ್ ‘ಗುತ್ತಿಗೆ’ ನಿರ್ಧಾರಕ್ಕೆ ಅಸಮಾಧಾನ

IMG-20201121-WA0029
Published on

ಮಂಡ್ಯ: ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ರಾಜ್ಯ ಸರ್ಕಾರ 40 ವರ್ಷ ಗುತ್ತಿಗೆ ನೀಡುತ್ತಿರುವ ಕಬ್ಬು ಬೆಳೆಗಾರರಿಗೆ ಮಾಡಿದ ಮೋಸ ಎಂದು ಮೈಸೂರು ಸಕ್ಕರೆ ಕಾರ್ಖಾನೆ ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷ ಎಸ್.ಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಸಂಪುಟದಲ್ಲಿ ಏಕಾಏಕಿ 40 ವರ್ಷಗಳ ಅವಧಿಗೆ ನೀಡಲು ಟೆಂಡರ್ ಕರೆಯಲು ಆದೇಶ ನೀಡಿರುವುದು ಸರಿಯಲ್ಲ. ಜಿಲ್ಲೆಯ ಶಾಸಕರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಕರೆದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೇ.29ರಂದು ನಡೆದ ಸಭೆಯಲ್ಲಿ ಸರ್ಕಾರಿ ಒಡೆತನದ ಒ ಅಂಡ್ ಎಂ ಮುಖಾಂತರ ಕಾರ್ಖಾನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿ ಈಗ ಖಾಸಗಿಗೆ ನೀಡುವ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ ಮಾಡುವ ಅನ್ಯಾಯ ಮಾಡಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ರೈತರ ಬಗ್ಗೆ ಸರ್ಕಾರ ನಿರ್ಲಕ್ಷೃ ವಹಿಸುತ್ತಿದೆ. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಟನ್ ಕಬ್ಬಿಗೆ 2 ರೂ. 75 ಪೈಸೆಯಿಂದ 2 ರೂ. 85 ಪೈಸೆಗೆ ಎಂಬಂತೆ ಕೇವಲ 10 ಪೈಸೆಗೆ ಏರಿಕೆ ಮಾಡಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಆದ್ದರಿಂದ ಪ್ರತಿ ಕೆಜಿಗೆ 35 ರೂ. ನಂತೆ ಹೆಚ್ಚಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ನಿರ್ದೇಶಕ ಎಂ.ಆರ್.ಚನ್ನಪ್ಪ, ಶಂಕರೇಗೌಡ, ಪ್ರಶಾಂತ್‌ಕುಮಾರ್, ತುಳಸೀಧರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net