

ಚಿಕ್ಕಮಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿದರು.
ನನ್ನ ತೆರಿಗೆ ನನ್ನ ಹಕ್ಕು ಘೋಷವಾಕ್ಯದಡಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರಲ್ಲದೆ, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ತೆರಿಗೆ ನೀಡಿಕೆಯಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಂಶುಮAತ್, ಕೇಂದ್ರ ಸರ್ಕಾರ ತಾಯಿ ಸ್ಥಾನದಲ್ಲಿ ನಿಂತು ಪ್ರತಿ ರಾಜ್ಯಗಳಿಗೆ ನ್ಯಾಯ ಕಲ್ಪಿಸಬೇಕು. ಆದರೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇದೆ. ಈ ಮೂಲಕ ಸಂವಿಧಾನ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಅತಿ ವೃಷ್ಟಿ ಪರಿಹಾರ, ಬರ ಪರಿಹಾರ, ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ನೀಡುವಂತೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸದೆ ಮೌನವಾಗಿದ್ದಾರೆ. ಆದರೆ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎನ್ನುವ ಮೂಲಕ ಜನರ ಕಷ್ಟಗಳಿಗೆ ಸ್ಪಂಧಿಸದೆ ಸರ್ಕಾರವನ್ನು ಟೀಕಿಸುವುದರಲ್ಲೇ ಮಗ್ನರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೋಭಾಕರಂದ್ಲಾಜೆ ಎರಡು ಬಾರಿ ಜಿಲ್ಲೆಯ ಸಂಸದೆಯಾಗಿ, ಕೇಂದ್ರ ರೈತ ಕಲ್ಯಾಣ ಸಚಿವೆಯೂ ಆಗಿದ್ದಾರೆ. ಈವರೆಗೂ ರೈತರ ಸಮಸ್ಯೆ, ಕೇಂದ್ರದ ಅನುದಾನದ ಕುರಿತು ಒಮ್ಮೆಯೂ ಚರ್ಚಿಸಿಲ್ಲ. ಬದಲಾಗಿ ಭಾವನಾತ್ಮಕ ವಿಚಾರ ಮುಂದಿಟ್ಟುಕೊAಡು ಕೋಮುದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವರು ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಗೆ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದರು.
ತೆರಿಗೆ ಪಾಲು ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಖಂಡನೀಯ. ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಡವರಂತೆ ಮೌನವಹಿಸದೆ ತುಟಿ ಬಿಚ್ಚಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಅನುದಾನ, ಸವಲತ್ತುಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡದ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿz್ದೆÃವೆ. ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ರಾಜ್ಯದ ಜನರ ಹಿತಕ್ಕಾಗಿಯೇ ಹೊರತು ಕಾಂಗ್ರೆಸ್ ಹಿತಕ್ಕಾಗಿ ಅಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜಿಎಸ್ಟಿ ಪಾಲು ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ ಮಾತನಾಡಿ, ಕೇಂದ್ರಕ್ಕೆ ಅಧಿಕ ತೆರಿಗೆ ಆದಾಯ ತಂದುಕೊಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಲೋಕಸಭೆ ಚುನಾವಣೆ ಮುಂದಿಟ್ಟುಕೊAಡು ಜಿಎಸ್ಟಿ ಪಾಲು ಹಂಚಿಕೆಯಲ್ಲಿ ವಿರೋಧ ಪಕ್ಷದ ರಾಜ್ಯಗಳಿಗೆ ತಾರತಮ್ಯ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದಸ್ವಾಮಿ, ಮುಖಂಡರಾದ ಡಿ.ಎಲ್.ವಿಜಯ್ಕುಮಾರ್, ಎಂ.ಡಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಪ್ರಮುಖರಾದ ಹನೀಫ್, ಹರೀಶ್, ಸಿ.ಎನ್.ಅಕ್ಮಲ್, ತನೋಜ್ಕುಮಾರ್ ಮತ್ತಿತರರಿದ್ದರು.