ಮೈಲಾರೇಶ್ವರ ದೇವಸ್ಥಾನ ಶಿವರಾತ್ರಿ ಆಚರಣೆ

GAN-4
Published on

ಕುಂದಾಪುರ: ಚಿಕ್ಕನಸಾಲು ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ ನಡೆಯಿತು. ಬೆಳಗ್ಗೆ ದೇಗುಲದಲ್ಲಿ ಯುವಕ ಮಂಡಲ ವತಿಯಿಂದ ದೀಪಾಲಂಕಾರ, ಹೂವಿನ ಅಲಂಕಾರ ಹಾಗೂ ಶತರುದ್ರಾಭಿಷೇಕ ನಡೆಯಿತು. ಸಂಜೆ ಭಜನೆ, ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು. 48ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿರುವ ಮೈಲಾರೇಶ್ವರ ಯುವಕ ಮಂಡಲ ಶಿವರಾತ್ರಿ ಅಂಗವಾಗಿ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ನೃತ್ಯ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಸ್ಟಾರ್ ನೈಟ್ ಮಂಗಳೂರು ಅವರಿಂದ ಸಂಗೀತ ರಸಮಂಜರಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net