ಮೈಸೂರು ವಿಮಾನ ನಿಲ್ದಾಣ.. ಇನ್ಮುಂದೆ 'ನಾಲ್ವಡಿ ಕೃಷ್ಣರಾಜ ಒಡೆಯರ್' ಎಂದು ನಾಮಕರಣ

mys
Published on

ಮೈಸೂರು: ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಈ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು.
ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಅದರಂತೆ ಮನವಿಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ಸಂಸದರು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರ ಜತೆಗೆ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net