ಮೈಸೂರು ಬಂದ್ : ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಯತ್ನ

Mysore bandh Attempt to siege RSS office
Published on

ಮೈಸೂರು: ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ ಸಂದರ್ಭ ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಲಾಯಿತು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಕಾರ್ಯಕರ್ತರು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ತಡೆಯೊಡ್ಡಿದಾಗ ಪೊಲೀಸರು ಹಾಗೂ ಲಕ್ಷ್ಮಣ್ ನಡುವೆ ವಾಗ್ವಾದ ನಡೆಯಿತು. ‘ಅಂಬೇಡ್ಕರ್‌ರನ್ನು ಅವಹೇಳನ ಮಾಡಿದ ಅಮಿತ್‌ಷಾರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಲಾಯಿತು. ಆರ್‌ಎಸ್‌ಎಸ್ ಕಚೇರಿಯ ಎರಡು ಭಾಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಯಾರು ಸಹ ತೆರಳದಂತೆ ಮಾಡಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮಾಡಿದರು. ನಗರದ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net