ಮೈಸೂರಿನ ಕೋಳಿಗಳಲ್ಲಿ ಹಕ್ಕಿಜ್ವರ ಇಲ್ಲ, ವಾರದಲ್ಲಿ ಮೂರು ದಿನ ಮಾಂಸ ಮಾರಾಟಕ್ಕೆ ಅವಕಾಶ

Poultry Farming vvani
Published on

ಮೈಸೂರು: ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ನಗರದಲ್ಲಿ ಕೋಳಿ ಮಾಂಸ ಮಾರಾಟಕ್ಕೆ ಹೇರಿದ್ದ ನಿಷೇಧವನ್ನು ಮಹಾನಗರ ಪಾಲಿಕೆ ಹಿಂದಕ್ಕೆ ಪಡೆದಿದೆ.

ನಾಳೆಯಿಂದಲೇ ಕೋಳಿ ಮಾಂಸ ಮಾರಾಟಕ್ಕೆ ಮೈಸೂರು ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಇತ್ತೀಚೆಗೆ ಮೈಸೂರಿನಲ್ಲಿ ಕೊಕ್ಕರೆ ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಹಕ್ಕಿಜ್ವರ ಇರಬಹುದು ಎಂದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋಳಿ ಮಾಂಸ ಮಾರಾಟ ನಿಷೇಧಿಸಲಾಗಿತ್ತು.

ಕೋಳಿ ಮಾಂಸ ಮಾರಾಟ ನಿಷೇಧ ಮಾಡುತ್ತಿದ್ದಂತೆ ಕುರಿ, ಮೇಕೆ ಮಾಂಸಕ್ಕೆ ಅಧಿಕ ಬೇಡಿಕೆ ಕಂಡು ಬಂದಿತ್ತು. ಅಲ್ಲದೆ ಮಾಂಸದ ದರ ಕೂಡ ಅಧಿಕವಾಗಿತ್ತು.

ಮೈಸೂರಿನ ಕೋಳಿಗಳಲ್ಲಿ ಹಕ್ಕಿಜ್ವರದ ವೈರಸ್​ ಇಲ್ಲ ಎಂದು ಪಶುಪಾಲನ ಇಲಾಖೆ ವರದಿ ನೀಡಿದ ಬಳಿಕ ನಿಷೇಧ ತೆರವುಗೊಳಿಸಲಾಗಿದೆ.

ವಾರದಲ್ಲಿ ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net