ಮೈಸೂರು ನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್, ಉಪ ಮೇಯರ್ ಸ್ಥಾನ ಪಡೆದಿರುವುದು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು: ಬಸವರಾಜ ಬೊಮ್ಮಾಯಿ

karanataka_cm
Published on

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್, ಉಪ ಮೇಯರ್ ಎರಡು ಸ್ಥಾನಗಳಿಸಿರುವುದು ಮೈಸೂರಿನ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೂ, ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ.

ಕಾಂಗ್ರೆಸ್ ಅವಧಿಯಲ್ಲಿ ಆಗಿರುವ ಹಿನ್ನಡೆಯನ್ನು ಗಮನಿಸಿರುವ ನಗರಪಾಲಿಕೆ ಸದಸ್ಯರು ಬಿಜೆಪಿ ಬೆಂಬಲಿಸಿದ್ದಾರೆ. ಈ ಬಾರಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಯಿತು. ಸಂಖ್ಯ ಬಲದ ಆಧಾರದ ಮೇಲೆ ಸ್ಪರ್ಧೆಗೆ ಮುಂದಾಗಿದವು. ಉಪ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಕೂಡ ಪ್ರಯತ್ನಿಸಿತು. ಆದರೆ ತಾಂತ್ರಿಕವಾಗಿ ಜೆಡಿಎಸ್‌ಗೆ ಸೋಲಾಯಿತು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net