ವಾರಣಾಸಿಗೆ ಭೇಟಿ ನೀಡಿದ ಮೈಸೂರು ನಗರ ಪಾಲಿಕೆ ತಂಡ

Mysore City Corporation team visited Varanasi
Published on

ಮೈಸೂರು: ನಗರ ಪಾಲಿಕೆ ಮೇಯರ್ ಶಿವಕುಮಾರ್ ನೇತೃತ್ವದ ತಂಡ ಗುರುವಾರ ಉತ್ತರ ಪ್ರದೇಶದ ವಾರಣಾಸಿ ನಗರ ಪಾಲಿಕೆಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿತು.

ವಾರಣಾಸಿಯಲ್ಲಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳು, ಕಟ್ಟಡ ತ್ಯಾಜ್ಯಗಳ ವಿಲೇವಾರಿ, ತ್ಯಾಜ್ಯ ಸಂಸ್ಕರಣೆ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ, ತೆರಿಗೆ ಸಂಗ್ರಹಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಮಾಹಿತಿ ಪಡೆದರು. ಪಾಲಿಕೆ ತಂಡ ಶುಕ್ರವಾರ ಮುಂಬೈಗೆ ಭೇಟಿ ನೀಡಿ ನಗರದ ಅಭಿವೃದ್ಧಿ ಹಾಗೂ ಸ್ವಚ್ಛತೆಯ ನಿರ್ವಹಣೆ ಕುರಿತು ಚರ್ಚೆ ನಡೆಸಲಿದೆ. ತಂಡದಲ್ಲಿ ಉಪ ಮೇಯರ್ ಡಾ.ಜಿ. ರೂಪಾ, ನಗರ ಪಾಲಿಕೆ ಆರೋಗ್ಯಾಧಿಕಾರಿಗಳಾದ ಡಾ.ಡಿ.ಜಿ. ನಾಗರಾಜ್, ರೂಪಶ್ರೀ, ನಂದೀಶ್ ಹಾಗೂ ಪಾಲಿಕೆ ಸದಸ್ಯರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net