Mysore Dasara| ಚುನಾಯಿತ ಸರ್ಕಾರಗಳು ಉಳಿಯುವ ಚಿಂತನೆ ಮೂಡಲಿ: ಹಂ.ಪ. ನಾಗರಾಜಯ್ಯ

Mysore Dasara
Published on

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ (Mysore Dasara) ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಚಾಲನೆ ನೀಡಿದ್ದಾರೆ. ನಾಡಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪರ್ಚಾನೆ ಮಾಡುವ ಮೂಲಕ ದಸರಾವನ್ನು ಉದ್ಘಾಟಿಸಿದರು.

ನಾಡಹಬ್ಬ ದಸರಾವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಎಂಬುದು ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ, ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತ. ದಸರಾ ಅರಮನೆ ಹಬ್ಬವಲ್ಲ, ಜನ ಆರಿಸಿದ ಸರ್ಕಾರ ನಡೆಸುವ ಹಬ್ಬ ಎಂದು ಹೇಳಿದ್ದಾರೆ.

Mysore Dasara

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಎಷ್ಟೇ ಅಡ್ಡಿ ಆತಂಕಗಳು ಎದುರಾಗುತ್ತಿದ್ದರೂ ಎದೆಗುಂದದೆ ಸೆಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ, ಸೌಮ್ಯ ಸ್ವಭಾವ ದೌರ್ಬಲ್ಯವಲ್ಲ. ಪ್ರತಿಕೂಲ ಪ್ರವಾಹವನ್ನು ಎದುರಿಸುವ ಶಕ್ತಿ ಪ್ರತಿಯೊಬ್ಬರಲ್ಲೂ ಇರಬೇಕು.

ಇಸ್ರೇಲ್ – ಪ್ಯಾಲೆಸ್ಟೈನ್, ರಷಿಯಾ – ಉಕ್ರೈನ್ ಯುದ್ದ ನಿಲ್ಲಲಿ. ಹೆಣ್ಣು ಭ್ರೂಣ ಹತ್ಯೆ ನಿಲ್ಲಲಿ. ಶಾಸನಸಭೆಯಲ್ಲಿ ಸ್ತೀಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿ. ಸರ್ಕಾರ ಉರುಳಿಸುವ ದುರಾಲೋಚನೆ ಬರದಂತೆ ತಡೆದು ಚುನಾಯಿತ ಸರ್ಕಾರಗಳು ಉಳಿಯುವ ಚಿಂತನೆ ಮೂಡಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಧೈರ್ಯ ತುಂಬಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net