ಮೈಸೂರು ದಸರಾ: ಚಾಮುಂಡಿಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಸೋಮಶೇಖರ್

mysore dasara
Published on

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಜು.26 ರಂದು ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ನಡೆಯುತ್ತಿರುವ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಭಾನುವಾರ ಪರಿಶೀಲಿಸಿದರು.

ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ದಸರಾ ಉತ್ಸವಕ್ಕೆ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿದೆ. ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ 13 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ವೇದಿಕೆ ಮುಂಭಾಗದಲ್ಲಿ 1400 ಜನರು ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಬಹುದು. ಆಯ್ದ 14 ಬುಡಕಟ್ಟು ಜನರೊಂದಿಗೆ ರಾಷ್ಟ್ರಪತಿ ಫೋಟೊ ಸೆಷನ್‌ನಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ 10 ನಿಮಿಷ ಸಮಯ ಕಾಲಾವಕಾಶ ನಿಗದಿ ಪಡಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಹಾಗೂ ಇತರರು ಇದ್ದರು.

ಬಿಗಿ ಬಂದೋಬಸ್ತ್: ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿ ಸಲಾಗಿದೆ. ಬೆಟ್ಟಕ್ಕೆ ಆಗಮಿಸುತ್ತಿರುವ ವಾಹನಗಳನ್ನು ಪೊಲೀಸರು ತಾವರೆಕಟ್ಟೆ ಬಳಿ ತಡೆದು ಪರಿಶೀಲಿಸುತ್ತಿದ್ದಾರೆ. ಬೆಟ್ಟದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಿಸಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net