ಮೈಸೂರು ತಹಶೀಲ್ದಾರ್ ಕಚೇರಿಯಲ್ಲಿ ಕಡತ ಪರಿಶೀಲಿಸಿದ ಜಿಲ್ಲಾಧಿಕಾರಿ ಭೇಟಿ

mysore dc checked the file in the Mysore Tehsildar office
Published on

ಮೈಸೂರು: ನಗರದ ತಹಶೀಲ್ದಾರ್ ಕಚೇರಿಗೆ ಗುರುವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯಗಳ ಪ್ರಗತಿ ಪರಿಶೀಲಿಸಿ ಕುಂದುಕೊರತೆಗಳನ್ನು ಆಲಿಸಿದರು.

ಈ ಸಂದರ್ಭ ಆಧಾರ್ ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆ ಗಳನ್ನು ಪರಿಶೀಲಿಸಿ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ನಾಡ ಕಚೇರಿಗೆ ಭೇಟಿ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ವರುಣ ನಾಡ ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವು ಕಡತಗಳನ್ನು ಪರೀಶಿಲಿಸಿದರು.

ಪಹಣಿ, ಆಧಾರ್ ತಿದ್ದುಪಡಿ ಮತ್ತು ನೋಂದಣಿ ಸಂಬಂಧ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ನಂತರ ನಗರದ ಕರ್ನಾಟಕ ಓನ್ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯನಿರ್ವಹಿ ಸಬೇಕು ಎಂದು ಸೂಚಿಸಿದರು. ತದ ನಂತರ ಪಕ್ಕದಲ್ಲಿದಲ್ಲಿರುವ ಆಹಾರ ಇಲಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ಆಹಾರ ನಿರೀಕ್ಷಕ ವೇಣುಗೋಪಾಲ್ ಹಾಗೂ ವಿನೋದ್ ಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net