

ಮೈಸೂರು: ಮೈಸೂರಿನ ವಿಜಯನಗರದಲ್ಲಿ ವೈದ್ಯ ದಂಪತಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಡಾ.ಕೇಶವ ಮತ್ತು ಡಾ.ಕೃಷ್ಣಕುಮಾರಿ ಹಲ್ಲೆಗೊಳಗಾದ ವೈದ್ಯ ದಂಪತಿ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ಪ್ಲೀಸ್… ನನ್ನ ಮಗಳನ್ನು ಕಾಪಾಡಿ ಎಂದು ಗೋಗರೆಯುತ್ತಿದ್ದ ತಂದೆ ಕಣ್ಣೆದುರಲ್ಲೇ ಪ್ರಾಣಬಿಟ್ಟ ಕಂದಮ್ಮ! ವಿಮಾನದಲ್ಲಿ ನಡೆದದ್ದಾದರೂ ಏನು?
ಕಳ್ಳತನ ಮಾಡಲೆಂದು ವೈದ್ಯ ದಂಪತಿ ಮನೆಗೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಮನೆಯಲ್ಲಿದ್ದ ಡಾ. ಕೃಷ್ಣಕುಮಾರಿ ತಲೆಗೆ ಹೊಡೆದಿದ್ದಾನೆ. ಕೆಲ ಸಮದ ಬಳಿಕ ಮನೆಗೆ ಬಂದ ಡಾ. ಕೇಶವ ಅವರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಯ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.