ಮೈಸೂರು ದಸರಾ ದ.ಕ. ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

mng--5 Oct Tablo
Published on

ಮಂಗಳೂರು: ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ, ಸಂಸ್ಕೃತಿ,ಸಂಪ್ರದಾಯಿಕ ಕ್ರೀಡೆ ಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಲಭಿಸಿದೆ.

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ಸಿಇಒ ಅವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ ಕಾರ್ಯ ನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net