

ಮೈಸೂರು: ಏಕಲವ್ಯ ನಗರದ ಅಲೆಮಾರಿ ಜನರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುಡಿಸಲು ನಿಮಾ ಣರ್ ಮಾಡಿ 51 ದಿನಗಳಿಂದ ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಅಂತ್ಯಗೊಂಡಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಹಾಗೂ ಅಲೆಮಾರಿ ಸಮುದಾಯದ ಮುಖಂಡರ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು, ಅಲೆಮಾರಿ ಸಮುದಾಯದವರಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಲು ಅಲೆಮಾರಿ ಸಮುದಾಯದವರು ನಿರ್ಧರಿಸಿದರು.
ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಅಲೆಮಾರಿ ಸಮುದಾಯದವರು ಸೆ.15 ರಿಂದ ಹೋರಾಟ ಪ್ರಾರಂ ಭಿಸಿದ್ದರು. ಆದರೆ, ಹಕ್ಕುಪತ್ರ ನೀಡುವ ವಿಚಾರದಲ್ಲಿ ಜಿಲ್ಲಾಡಳಿತ ಸ್ಪಷ್ಟ ಭರವಸೆ ನೀಡದ ಹಿನ್ನೆಲೆಯಲ್ಲಿ ಧರಣಿ ಮುಂದುವರೆಸಿದ್ದರು. ಜಿಲ್ಲಾಡಳಿತದಿಂದ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಸಂದರ್ಭ ಅಲೆಮಾರಿ ಸಮುದಾಯದವರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ೇರಾವ್ ಹಾಕಿ ಹಕ್ಕುಪತ್ರಕ್ಕೆ ಒತ್ತಾಯಿಸಿದ್ದರು.
ಅಲೆಮಾರಿಗಳ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಎಸ್.ಟಿ. ಸೋಮಶೇಖರ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಭೆ ನಡೆಸಿ ಅಲೆಮಾರಿ ಸಮುದಾಯದವರ ಬೇಡಿಕೆಯನ್ನು ಆಲಿಸಿದರು. ಈ ಸಂದರ್ಭ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ನಗರದ ಹೊರವಲಯದಲ್ಲಿರುವ ಶಾದನಹಳ್ಳಿ ಗ್ರಾಮದ ಏಕಲವ್ಯ ನಗರದಲ್ಲಿ 200ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ವಾಸ ಮಾಡುತ್ತಿದ್ದು, ಕೂಡಲೇ ಅವರಿಗೆ ಹಕ್ಕುಪತ್ರ ನೀಡಬೇಕು. ಆದರೆ, ಕೆಲವು ಪ್ರಭಾವಿ ವ್ಯಕ್ತಿಗಳು ಅವರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸುತ್ತಿದ್ದು, ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ಗೆ ನಿರ್ದೇಶನ ನೀಡಲಾಗುವುದು. ವರದಿಯ ಆಧಾರದ ಮೇಲೆ ಹಕ್ಕುಪತ್ರ ನೀಡಲು ಕ್ರಮ ವಹಿಸಲಾಗುವುದು. ಒಂದುವೇಳೆ ಅಲೆಮಾರಿ ಸಮುದಾಯದವರು ವಾಸ ಮಾಡುತ್ತಿರುವ ಜಾಗ ಖಾಸಗಿಯವರಿಗೆ ಸೇರಿದ್ದರೆ ಪರ್ಯಾಯ ಜಾಗದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾ ಗುವುದು ಎಂದು ಭರವಸೆ ನೀಡಿದರು.