ಮೈಸೂರು: ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯನಗರ 2ನೇ ಹಂತದಲ್ಲಿ ಕಾನೂನು ಬಾಹಿರವಾಗಿ ಜೂಜಾಟವಾಡುತ್ತಿದ್ದ 4 ಆರೋಪಿಗಳನ್ನು ವಶಕ್ಕೆ ಪಡೆದು 12,500 ರೂ. ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.