ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಸಂಬಂಧ ಇಲ್ಲ : ಯದುವೀರ್

yaduveer
Published on

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಸದ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪಾಕ ಎನ್ನುವುದು ಸಂಸ್ಕೃತ ಪದ. ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದು ಅದನ್ನು ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್‌ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಇದೇ ರೀತಿ ಮಾಡುತ್ತಾ ಹೋದರೆ ಎಷ್ಟೋ ಹೆಸರುಗಳನ್ನು ಬದಲಾಯಿಸಬೇಕಾಗುತ್ತದೆ ಎಂದರು.

ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನು ರಾಯಭಾರಿ ಆಗಲು ಬಯಸುವುದಿಲ್ಲ, ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ. ನಾನು ಜನ ಸೇವೆ ಕ್ಷೇತ್ರದಲ್ಲಿದ್ದೇನೆ, ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶದಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷಿಕ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net