

ಮೈಸೂರು: ನಗರದ ಜೆಕೆ ಮೈದಾನದಲ್ಲಿ ಮೇಕ್ ಸೊಸೈಟಿ ಸ್ಮೈಲ್ ಫೌಂಡೇಷನ್ ವತಿಯಿಂದ ಭಾನುವಾರ ಮೈಸೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.
ಶಾಸಕ ಕೆ. ಹರೀಶ್ ಗೌಡ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿ, ನಗರದಲ್ಲಿ ಚಲನಚಿತ್ರೋತ್ಸವ ಹಮ್ಮಿಕೊಂಡಿರುವುದು ಸಂತಸದ ವಿಚಾರ. ಸಿನಿಮಾ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಬೇಕು. ಎಂದು ಮನವಿ ಮಾಡಿದರು.
ಪ್ರತಿ ಮಕ್ಕಳಲ್ಲೂ ಒಂದಲ್ಲಾ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕಾರ್ಯವನ್ನು ಪಾಲಕರು ಮಾಡಬೇಕು. ಮಕ್ಕಳ ಪ್ರತಿಭೆ ಹೊರ ಹಾಕಲು ಇಂತಹ ವೇದಿಕೆಗಳ ಅವಶ್ಯಕತೆ ಇದೆ. ಮಕ್ಕಳ ಅಭಿರುಚಿಯನ್ನು ಗಮನಿಸಿ ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಸ್ತ್ರೀ ರೋಗ ತಜ್ಞೆ ಡಾ.ರೇಖಾ ಮಾತನಾಡಿ, ಮಗುವಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ, ಹೆಚ್ಚು ಅಂಕ ಗಳಿಸುತ್ತಿದೆ ಎಂಬುದನ್ನು ಪಾಲಕರು ಗಮನಿಸಿ ಆ ಕ್ಷೇತ್ರದಲ್ಲಿ ಮಗುವನ್ನು ಬೆಳೆಯಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಚಲನಚಿತ್ರೋತ್ಸವ ಅಂಗವಾಗಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಗಾಯನ ಸ್ಪರ್ಧೆ, ಲಂಕಾರಿಕ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಷನ್ ಅಧಕ್ಷೆ ರೇಖಾ ಶ್ರೀನಿವಾಸ್, ಸಂಪರ್ಕಾಧಿಕಾರಿ ಎಸ್.ಎನ್. ಶಂಕರ್, ಉದ್ಯಮಿ ಗಗನ್‌ದೀಪ್, ಸಿನಿ ಸಂತೆ ನಿರ್ದೇಶಕಿ ಸಂಧ್ಯಾ ರಾಣಿ ಹಾಗೂ ಇತರರು ಇದ್ದರು.