ಮೈಸೂರಿಗೆ ಆಗಮಿಸುತ್ತಿರುವ ಪಿಎಂ ಮೋದಿಗೆ ವಿಶೇಷ ಉಡುಗೊರೆ

DRETRET
Published on

ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಸಾಂಸ್ಕೃತಿಕ ನಗರಿ ಮೈಸೂರಿಗೆ ಸಂಜೆ ವೇಳೆಗೆ ಆಗಮಿಸಲಿದ್ದಾರೆ.

'ಯೋಗ' ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಲಿರುವ ಪಿಎಂ ಮೋದಿಗೆ ವಿಶೇಷ ಉಡುಗೊರೆ ನೀಡಲು ಆಭರಣ ವ್ಯಾಪಾರಿಗಳು ಮುಂದಾಗಿದ್ದಾರೆ. ನವರತ್ನ ಜ್ಯುವೆಲ್ಲರ್ಸ್ ವತಿಯಿಂದ ಸ್ವರ್ಣಾಕ್ಷರಗಳಲ್ಲಿ ಕೆತ್ತನೆ ಮಾಡಿರುವ ವಿಶೇಷ ಫೋಟೋವನ್ನು ಸಂಸದ ಪ್ರತಾಪ್ ಸಿಂಹ ಮೂಲಕ ಈ ನೆನಪಿನ ಕಾಣಿಕೆ ನೀಡಲಾಗುವುದು. ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಭಾವಚಿತ್ರವನ್ನು ಬಂಗಾರದಿಂದ ಕೆತ್ತನೆ ಮಾಡಲಾಗಿದೆ.

ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕವನ್ನ ಅಳವಡಿಕೆ ಮಾಡಲಾಗಿದೆ. ಥಾಯ್ಲೆಂಡ್​​​ನಲ್ಲಿ ಮಾಡಿಸಲಾಗಿರುವ ವಿಶೇಷ ಗಿಫ್ಟ್​ ಇದಾಗಿದ್ದು, ಮೈಸೂರಿಗರ ಪರವಾಗಿ ಯೋಗಕ್ಕೆ ಮೈಸೂರನ್ನ ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಚಿನ್ನದ ಅಕ್ಷರಗಳಲ್ಲಿ ಕೃತಜ್ಞತೆ ಸಲ್ಲಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net