ಸಂಸತ್​ ಅಧಿವೇಶನದ ವೇಳೆ ಭದ್ರತಾ ಲೋಪ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ

Pratap Simha
Published on

ಮೈಸೂರು: ನೂತನ ಸಂಸತ್​ ಭವನದಲ್ಲಿ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಸಂಸದ ಪ್ರತಾಪ್​ ಅದರ ಬಗ್ಗೆ ಬಿಟ್ಟು ಬೇರೆ ಬಿಟ್ಟು ಬೇರೆ ಏನಾದರೂ ಕೇಳಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಮಾತನಾಡಿದ ಸಂಸದ ಪ್ರತಾಪ್​ ಸಿಂಹ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ. ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ ಎಂದಿದ್ದಾರೆ.

ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು. ಇದಕ್ಕೆಲ್ಲಾ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ನಾನು ದೇಶಪ್ರೇಮಿಯೋ ಅಥವಾ ದೇಶದ್ರೋಹಿಯೋ ಎಂದು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ ಎಂದು ಭದ್ರತಾ ಲೋಪ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net