

ಮೈಸೂರು: ಮಹಾರಾಷ್ಟ್ರದ ಪುಣೆಯ ಸಾವಿತ್ರಿಬಾಯಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾವಳಿಗೆ ಮೈಸೂರು ವಿವಿ ತಂಡವನ್ನು ಆಯ್ಕೆ ಮಾಡಲಾಗಿದೆ.
ಮೈಸೂರು ವಿವಿ ತಂಡವು ತರಬೇತುದಾರ ಪಿ.ಎಸ್.ಮಧುಸೂದನ್ ಜತೆ ಸಾವಿತ್ರಿಬಾಯಿ ವಿಶ್ವವಿದ್ಯಾಲಯ ಪಂದ್ಯಾವಳಿಯಲ್ಲಿ ಭಾಗಿಯಾಗಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.