ಅ.19ರಂದು ಮೈಸೂರು ವಿವಿ 100ನೇ ಘಟಿಕೋತ್ಸವ, ಪ್ರಧಾನಿ ಭಾಷಣ

mysure vv- modi
Published on

ಮೈಸೂರು: ದೇಶದ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯಕ್ಕೀಗ 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮ.

ಅ.19ರ ಬೆಳಗ್ಗೆ 11ಕ್ಕೆ ವರ್ಚುವಲ್​ ಮೂಲಕ ಕ್ರಾಫರ್ಡ್​ ಭವನದಲ್ಲಿ ಘಟಿಕೋತ್ಸವ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆನ್​ಲೈನ್​ ಮೂಲಕವೇ ಘಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ವಿ.ಆರ್​. ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​. ಅಶ್ವತ್ಥನಾರಾಯಣ್​ ಪಾಲ್ಗೊಳ್ಳಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್​.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net