

ಮೈಸೂರು: ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿಗೆ ಮೈಸೂರು ವಿವಿ ತಂಡ ಆಯ್ಕೆ ಮಾಡಲಾಗಿದೆ.
ತಂಡದ ಸದಸ್ಯರು ತರಬೇತುದಾರ ಡಾ.ಬಿ.ವಿ.ಗಣೇಶ್ ಜತೆ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿನ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.