ಮೈಸೂರು ವಲಯ ಅಂತರ್ ಕಾಲೇಜು ಬಾಸ್ಕೆಟ್ ಬಾಲ್ ಪಂದ್ಯಾವಳಿ

mng--30 Aug Fr.Muller
Published on

ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮೈಸೂರು ವಲಯದ 2023-24ರ ಅಂತರ್ ಕಾಲೇಜು ಬಾಸ್ಕೆಟ್ ಬಾಲ್ ಎರಡು ದಿನಗಳ ಪಂದ್ಯಾವಳಿಗೆ ಬುಧವಾರ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.


ಮಂಗಳೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಉದ್ಘಾಟಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ನಿರ್ದೇಶಕರಾದ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಅಧ್ಯಕ್ಷತೆ ವಹಿಸಿದ್ದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ರೋಶನ್ ಕ್ರಾಸ್ತಾ ಸ್ವಾಗತಿಸಿದರು. ಕ್ರೀಡಾ ಸಮಿತಿಯ ಕಾರ್ಯದರ್ಶಿ ಆಲನ್ ಜಿನ್ಸನ್‌ವಂದಿಸಿದರು.


ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಉಪ ಆಡಳಿತಾಧಿಕಾರಿಗಳಾದ ಅಶ್ವಿನ್ ಕ್ರಾಸ್ತ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ವಿಲ್ಮಾ ಮೀರಾ ಡಿಸೋಜ, ಮೈಸೂರು ವಲಯದ ಕ್ರೀಡಾ ಸಂಚಾಲಕ ಡಾ.ಸುರೇಶ್ ಎನ್., ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿನ ದೈಹಿಕ ಶಿಕ್ಷಕ ಚೆನ್ನಕೇಶವ ಎಂ. ಜಿ. ಮೊದಲಾದವರಿದ್ದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ವಿವಿಧ ವಿದ್ಯಾಸಂಸ್ಥೆಗಳಿಂದ ಒಟ್ಟು 18 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net