ಮೈಸೂರು ವಲಯ ಅಂತರಕಾಲೇಜು ಬಾಸ್ಕೆಟ್‌ಬಾಲ್ ಟೂರ್ನಿಗೆ ಚಾಲನೆ

f
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮೈಸೂರು ವಲಯದ ಅಂತರಕಾಲೇಜು ಬಾಸ್ಕೆಟ್‌ಬಾಲ್ ಟೂರ್ನಿ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಅವರನ್ನು ಗೌರವಿಸಲಾಯಿತು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಉಪ ಆಡಳಿತಾಧಿಕಾರಿ ಅಶ್ವಿನ್ ಕ್ರಾಸ್ತ, ಪ್ರಭಾರ ಪ್ರಾಂಶುಪಾಲರಾದ ಡಾ.ವಿಲ್ಮಾ ಮೀರಾ ಡಿಸೋಜ, ಮೈಸೂರು ವಲಯದ ಕ್ರೀಡಾ ಸಂಚಾಲಕ ಡಾ.ಸುರೇಶ್ ಎನ್. ಮೊದಲಾದವರಿದ್ದರು.
Published on

ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮೈಸೂರು ವಲಯದ 2023-24ರ ಅಂತರಕಾಲೇಜು ಬಾಸ್ಕೆಟ್‌ಬಾಲ್ ಟೂರ್ನಿಗೆ ಬುಧವಾರ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಉದ್ಘಾಟಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ರೋಶನ್ ಕ್ರಾಸ್ತಾ ಸ್ವಾಗತಿಸಿದರು. ಕ್ರೀಡಾ ಸಮಿತಿ ಕಾರ್ಯದರ್ಶಿ ಆಲನ್ ಜಿನ್ಸನ್ ವಂದಿಸಿದರು. ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಉಪ ಆಡಳಿತಾಧಿಕಾರಿ ಅಶ್ವಿನ್ ಕ್ರಾಸ್ತ, ಮೈಸೂರು ವಲಯ ಕ್ರೀಡಾ ಸಂಚಾಲಕ ಡಾ.ಸುರೇಶ್ ಎನ್., ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ವಿಲ್ಮಾ ಮೀರಾ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ಚೆನ್ನಕೇಶವ ಎಂ.ಜಿ. ಮೊದಲಾದವರು ಹಾಜರಿದ್ದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ವಿವಿಧ ವಿದ್ಯಾಸಂಸ್ಥೆಗಳಿಂದ ಒಟ್ಟು 18 ತಂಡಗಳು ಭಾಗವಹಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net