ಮೈಮುಲ್​ ಚುನಾವಣೆ ಸೋಲಿನ ಆಘಾತ: ಮಾಜಿ ಸಿಎಂ ಸಿದ್ದರಾಮಯ್ಯ ಸಂಬಂಧಿ ಆತ್ಮಹತ್ಯೆ!

balaramu
Published on

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಬಂಧಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾ.16ರಂದು ಮೈಮುಲ್(ಮೈಸೂರು ಜಿಲ್ಲಾ ಹಾಲು ಉತ್ಪಾದಕ ಸಂಘಗಳ ಒಕ್ಕೂಟ) ಚುನಾವಣೆ ನಡೆದಿತ್ತು. ಮೈಮುಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಬಲರಾಮು ಸೋತಿದ್ದರು. ಮೈಮುಲ್ ಚುನಾವಣೆ ಸೋಲಿನ ಆಘಾತ ಮತ್ತಯ ಸಾಲಬಾಧೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಬಲರಾಮು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಿದೆ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿರಿ ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಮೈಸೂರು ತಾಲೂಕಿನ ಕುಪ್ಯ ಗ್ರಾಮದ ನಿವಾಸಿಯಾದ ಬಲರಾಮು ಇತ್ತೀಚಿಗೆ ನಡೆದ ಮೈಮುಲ್ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರ ಬಣದಲ್ಲಿ ಬಲರಾಮು ಗುರುತಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net