ಮೈಶುಗರ್ ಖಾಸಗೀಕರಣಕ್ಕೆ ವಿರೋಧ

Mysugar factory pvt opposed by organisations at mandya 1 Jan 20
Published on

ಮಂಡ್ಯ: ಜಿಲ್ಲೆಯ ಜೀವನಾಡಿ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೋರಾಟ ರೂಪಿಸಲು ಕರ್ನಾಟಕ ರಾಷ್ಟ್ರ ಸಮಿತಿ ಮುಂದಾಗಿದೆ.

ಡಿ.5ರಂದು ಮಧ್ಯಾಹ್ನ 12 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದ್ದು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಂಡ್ಯ ಕಬ್ಬು ಮತ್ತು ಮೈಶುಗರ್ ಜಿಲ್ಲೆಯ ಜನರೊಂದಿಗೆ ಭಾವನಾತ್ಮಕತೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಖಾಸಗೀಕರಣ ಮಾಡುವುದರಿಂದ ಆಗುವ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್.ವೆಂಕಟೇಶ್, ರೈತ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net