ಡಿ.13 ಮತ್ತು 14ರಂದು ಅಮೃತ ಮಹೋತ್ಸವ: ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಹೇಳಿಕೆ

Mysugar President C.D.Gangadhar press conference Mandya
Published on

ಮಂಡ್ಯ: ಮೈಷುಗರ್ ಪ್ರೌಢಶಾಲೆಯ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಡಿ.13 ಮತ್ತು 14ರಂದು ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷರೂ ಆದ ಅಮೃತ ಮಹೋತ್ಸವ ಸಮಿತಿ ಪೋಷಕ ಸಿ.ಡಿ.ಗಂಗಾಧರ ತಿಳಿಸಿದರು.

ಈ ಪ್ರೌಢಶಾಲೆಯಲ್ಲಿ ವಿದ್ಯೆ ಕಲಿತವರು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸನ್ನು ಕಂಡಿರುವುದು ಶಾಲೆಗೆ ಹೆಮ್ಮೆಯ ಸಂಗತಿ. ಅಂದು ಕಾರ್ಯಕ್ರಮ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನದೊಂದಿಗೆ ಪ್ರಾರಂಭಗೊಳ್ಳಲಿದ್ದು, ನಾಡಿನ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಾಲೆಯಲ್ಲಿ ವ್ಯಾಸಂಗ ಮಾಡಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೆ.ಎಸ್.ರಾಜಣ್ಣ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದೇ ವೇಳೆ ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಸಂಬಂಧ ಚರ್ಚೆ ನಡೆಯಲಿದೆ. ಇನ್ನು ಅಮೃತ ಮಹೋತ್ಸವದ ಪ್ರಯುಕ್ತ ಡಿ.6, 7 ಮತ್ತು 8ರಂದು ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ 17 ವರ್ಷದೊಳಗಿನವರ ರಾಜ್ಯಮಟ್ಟದ ಫುಟ್‌ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಹಿರಿಯ ವಿದ್ಯಾರ್ಥಿಗಳು ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.

ಸಮಿತಿಯ ಕಾರ್ಯದರ್ಶಿ ರಮೇಶ್, ಗೌರವಾಧ್ಯಕ್ಷ ಜಯರಾಂ, ಖಜಾಂಜಿ ಸತ್ಯನಾರಾಯಣದೇವ್, ಶ್ರೀನಿಧಿ, ನಾಗರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net