ಅ.16ರಂದು ಕುಡಿವ ನೀರಿನ ಯೋಜನೆ ಲೋಕಾರ್ಪಣೆ: ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಮಾಹಿತಿ

Mysugar President Press Conference Mandya
Published on

ಮಂಡ್ಯ: ಬೆಂಗಳೂರು ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮ ಅ.16ರಂದು ಬೆಳಗ್ಗೆ 10.30ಕ್ಕೆ ಮಳವಳ್ಳಿ ತಾಲೂಕು ತೊರೆಕಾಡನಹಳ್ಳಿ (ಟಿ.ಕೆ ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೈಷುಗರ್ ಅಧ್ಯಕ್ಷರೂ ಆದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ತಿಳಿಸಿದರು.

ಅಂದಾಜು 4,336 ಕೋಟಿ ರೂ ವೆಚ್ಚದ ಯೋಜನೆಯ ಮೂಲಕ 4 ಲಕ್ಷ ಸಂಪರ್ಕ ಕಲ್ಪಿಸಲಾಗುತ್ತಿದ್ದು, 50 ಲಕ್ಷ ಫಲಾನುಭವಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿಯಾಗಿ 775 ಎಂ.ಎಲ್.ಡಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಆಗಮಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮೈಷುಗರ್ ನೂತನ ಕಾರ್ಖಾನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬಳಿ ತೆರಳಿ ಯೋಜನೆಯ ವಿವರ ನೀಡಿ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಗ್ಯಾರಂಟಿ ಅನುಷ್ಠಾನ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಪ್ರಶಾಂತ್‌ಬಾಬು, ಮುಖಂಡರಾದ ಗುರುರಾಜ್, ಮುಜಾಯಿದ್, ನಾಗಭೂಷಣ್, ಚಿನಕುರಳಿ ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net