ಡಿ.28ರಂದು ಮೈಷುಗರ್ ಅಮೃತ ಮಹೋತ್ಸವ: ಅಧ್ಯಕ್ಷ ಸಿ.ಡಿ.ಗಂಗಾಧರ ಮಾಹಿತಿ

MySugar President Press Conference Mandya
Published on

ಮಂಡ್ಯ: ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ಡಿ.28ರಂದು ಬೆಳಗ್ಗೆ 9ಗಂಟೆಗೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷರೂ ಆದ ಹಿರಿಯ ವಿದ್ಯಾರ್ಥಿ ಸಿ.ಡಿ.ಗಂಗಾಧರ ತಿಳಿಸಿದರು.

ಸಮಾರಂಭದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸುವರು. ಉದ್ಘಾಟನೆಯನ್ನು ಕೇಂದ್ರ ಎಚ್.ಡಿ.ಕುಮಾರಸ್ವಾಮಿ ನೆರವೇರಿಸಲಿದ್ದು, ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಆಶಯ ನುಡಿಗಳನ್ನಾಡುವರು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅಮೃತಧಾರೆ ಸಂಚಿಕೆ ಬಿಡುಗಡೆ ಮಾಡಲಿದ್ದು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಧ್ಯಾಹ್ನ 2 ರಿಂದ 3 ಗಂಟೆವರೆಗೆ ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರಗೌಡ ಅಧ್ಯಕ್ಷತೆಯಲ್ಲಿ ಶೈಕ್ಷಣಿಕ ವಿಚಾರಗೋಷ್ಠಿ ಆಯೋಜಿಸಲಾಗಿದೆ. 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಲಿದ್ದಾರೆ. ಶಾಸಕ ರವಿಕುಮಾರ್‌ಗಣಿಗ ಬಹುಮಾನ ವಿತರಣೆ ಮಾಡಲಿದ್ದಾರೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ಸುಗಮ ಸಂಗೀತ ಗಾಯನ, ಶಾಲಾ ಮಕ್ಕಳಿಂದ ವಿವಿಧ ಮನರಂನಾ ಕಾರ್ಯಕ್ರಮ ನಡೆಯಲಿವೆ. ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಲೆಯ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಆಚರಣೆ ಸಮಿತಿ ಕಾರ್ಯದರ್ಶಿ ಟಿ.ರಮೇರ್, ಹಿರಿಯ ವಿದ್ಯಾರ್ಥಿಗಳ ಸಂಘದ ಬಿ.ಟಿ.ಜಯರಾಂ, ಖಜಾಂಚಿ ಜಿ.ಸತ್ಯನಾರಾಯಣರಾವ್, ಸತ್ಯನಾರಾಯಣದೇವ, ಟಿ.ಎಚ್.ವಿಶಾಲಾಕ್ಷಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net