ಮೈಸೂರಿನ ಬಿಜೆಪಿ ಶಾಸಕ ಎಸ್​.ಎ.ರಾಮದಾಸ್ ಆರೋಗ್ಯದಲ್ಲಿ ಏರುಪೇರು: ದಿಢೀರ್ ಆಸ್ಪತ್ರೆಗೆ

S A Ramadas
Published on

ಮೈಸೂರು: ಕಳೆದ ಕೆಲವು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಇಂದು ಮುಂಜಾನೆ ದಿಢೀರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಕೂಡಲೇ ಅವರನ್ನು ಸ್ಥಳೀಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿರುವ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್​ಗೂ ಒಳಪಡಿಸಲಾಗಿದೆ. ಇದರ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ಆದಾಗ್ಯೂ, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸಮಸ್ಯೆ ಪರಿಹರಿಸಲು ವೈದ್ಯರ ತಂಡ ಕಾರ್ಯನಿರತವಾಗಿದೆ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net