ಸರ್ಪ್ರೈಸ್​ ಎಂದು ಕಣ್ಣಿಗೆ ಬಟ್ಟೆ ಕಟ್ಟಿ ತನ್ನೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಯುವತಿ ಚಾಕು ಇರಿದಿದ್ದೇಕೆ?

Girl Stabbing 5 mar 20
Published on

ಮೈಸೂರು: ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಯುವಕನಿಗೆ ಸರ್ಪ್ರೈಸ್​ ನೀಡುವುದಾಗಿ ಕಣ್ಣಿಗೆ ಬಟ್ಟೆ ಕಟ್ಟಿ, ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿರುವ ಆತಂಕಕಾರಿ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದ ರವಿಕುಮಾರ್ ಚಾಕು ಇರಿತಕೊಳಗಾದ ಯುವಕ. ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದ ಯುವತಿ. ನಾಲ್ಕು ತಿಂಗಳ ಹಿಂದಷ್ಟೇ ಇಬ್ಬರಿಗೂ ವಿವಾಹ ನಿಶ್ಚಯವಾಗಿತ್ತು.

ಸೋಮವಾರ ಸಂಜೆ ಯುವತಿಯ ಮನೆಗೆ ಯುವಕ ತೆರಳಿದ್ದ ವೇಳೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿನಗೆ ಸರ್ಪ್ರೈಸ್ ತೋರಿಸುತ್ತೇನೆ ಎಂದು ಪುಸಲಾಯಿಸಿ ಕಣ್ಣಿಗೆ ಬಟ್ಟೆ ಕಟ್ಟಿಸಿ, ಕೃತ್ಯವೆಸಗಿದ್ದಾಳೆ.

ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಯುವತಿ, ನನಗೆ ವ್ಯಾಸಂಗ ಮಾಡಲು ಇಷ್ಟ ಇತ್ತು. ಆದರೆ, ಮನೆಯಲ್ಲಿ ಎಷ್ಟೇ ಹೇಳಿದರೂ ಕೇಳದೆ ಮದುವೆ ನಿಶ್ಚಯ ಮಾಡಿದರು. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಹೇಳಿದ್ದಾಳೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net