ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ: ವರ್ಗಾವಣೆ ಬೆನ್ನಲ್ಲೇ ರೋಹಿಣಿ ಸಿಂಧೂರಿ ಸ್ಪಷ್ಟನೆ

Swimming Pool
Published on

ಮೈಸೂರು: ಕಳೆದ ಒಂದು ತಿಂಗಳಿಂದ ಭಾರಿ ಸದ್ದು ಮಾಡಿದ್ದ ಮೈಸೂರು ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವರ್ಗಾವಣೆ ಬೆನ್ನಲ್ಲೇ ರೋಹಿಣಿ ಸಿಂಧೂರಿ ಉತ್ತರ ನೀಡಿದ್ದಾರೆ.

ಸರ್ಕಾರದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ಎರಡು ಪುಟಗಳ ಉತ್ತರ ಸಲ್ಲಿಸಿರುವ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲೂ ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ. ನಿರ್ಮಿತಿ ಕೇಂದ್ರದ 28.72 ಲಕ್ಷ ರೂ.ಗಳಲ್ಲಿ ಈಜುಕೊಳ ನಿರ್ಮಾಣವಾಗಿದೆ. ಪಾರಂಪರಿಕ ಕಟ್ಟಡಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂದು ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net