ಕ್ರೀಡಾಕೂಟ ಸಾಧನೆ ತೋರಲು ವೇದಿಕೆ

ಹುಣಸೂರು ನಗರದ ಶ್ರೀ ಆದಿಚುಂಚನಗಿರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ಶಾಸಕ ಜಿ.ಡಿ.ಹರೀಶ್‌ಗೌಡ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಎಸ್.ಪಿ.ಮಹದೇವ್, ಹೇಮಲತಾ, ರಾಜೇಶ್ವರಿ ಇತರರು ಇದ್ದರು.
ಹುಣಸೂರು ನಗರದ ಶ್ರೀ ಆದಿಚುಂಚನಗಿರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ಶಾಸಕ ಜಿ.ಡಿ.ಹರೀಶ್‌ಗೌಡ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಎಸ್.ಪಿ.ಮಹದೇವ್, ಹೇಮಲತಾ, ರಾಜೇಶ್ವರಿ ಇತರರು ಇದ್ದರು.
Published on
ಹುಣಸೂರು: ಕ್ರೀಡಾಕೂಟಗಳ ಆಯೋಜನೆ ವಿದ್ಯಾರ್ಥಿಗಳು ತಮ್ಮ ಸಾಧನೆ ಪ್ರದರ್ಶಿಸಲು ಉತ್ತಮ ವೇದಿಕೆಗಳಾಗಿವೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಅಭಿಪ್ರಾಯಪಟ್ಟರು.

ನಗರದ ಶ್ರೀ ಆದಿಚುಂಚನಗಿರಿ ಬಾಲಜಗತ್ ಮತ್ತು ಪಿಯು ಕಾಲೇಜಿನ ವತಿಯಿಂದ ಬುಧವಾರ ಆಯೋಜಿಸಿದ್ದ 28ನೇ ಚುಂಚಶ್ರೀ ಕ್ರೀಡೋತ್ಸವ 2025-26 ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಆದಿಚುಂಚನಗಿರಿ ಮಠದ ಸಂಸ್ಥಾಪಕರಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯ ಅವಿರತ ಶ್ರಮದಿಂದಾಗಿ ಮಠವು ದೇಶದೆಲ್ಲೆಡೆ ವ್ಯಾಪಿಸಿ, ಸಮುದಾಯದ ಶ್ರೇಯೋಭಿವೃದ್ಧಿಗೆ ಕಾರಣಕರ್ತರಾದರು. ಅಲ್ಲದೆ ಕಡಿಮೆ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ದಾಸೋಹ, ಅಕ್ಷರದಾಸೋಹ ಎಲ್ಲವನ್ನೂ ಉಚಿತವಾಗಿ ನೀಡಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯ ನೀಡಿದರು ಎಂದರು.

ಕೇವಲ ಪುಸ್ತಕ ಓದುವುದೊಂದೇ ಶಿಕ್ಷಣವಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಅದರಲ್ಲೂ ಕ್ರೀಡೆಯಲ್ಲಿ ಸಾಧನೆಗೈದವರನ್ನು ಹೆಚ್ಚು ಗುರುತಿಸಲಾಗುತ್ತದೆ. ಜತೆಗೆ ಆದರಿಸಲಾಗುತ್ತದೆ ಎಂದರು.

ಶ್ರೀ ಆದಿಚುಂಚನಗಿರಿ ಮಠದ ಮೈಸೂರ ಶಾಖೆಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 1.76 ಲಕ್ಷ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಕ್ರೀಡೆಯಲ್ಲಿ ಉದ್ದೀಪನಗೊಳಿಸಲು ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. 8 ಶಾಲೆಗಳು ಭಾಗವಹಿಸಿರುವ ವಿಭಾಗೀಯ ಮಟ್ಟದ ಈ ಕ್ರೀಡಾಕೂಟದಲ್ಲಿ ಸಾಧನೆಗೈದವರು ಆದಿಚುಂಚನಗಿರಿ ಮಠದ ಆವರಣದಲ್ಲಿ ಆಯೋಜನೆಗೊಳ್ಳುವ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಠದ ಭಕ್ತ ರಾಮಕೃಷ್ಣೇಗೌಡ, ಬಿಇಒ ಎಸ್.ಪಿ.ಮಹದೇವ, ಕ್ಷೇತ್ರ ಸಮನ್ವಯಾಧಿಕಾರಿ ಹೇಮಲತಾ, ಸಿಆರ್‌ಪಿ ಪ್ರಶಾಂತ್, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಂ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ಮುಖ್ಯಶಿಕ್ಷಕಿ ಕುಮುದಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net