100ಕ್ಕೂ ಹೆಚ್ಚು ಸಿಬ್ಬಂದಿ ಡ್ರೋನ್ ಕ್ಯಾಮರಾ ಮತ್ತು ಸಾಕಾನೆ ಬಳಸಿಕೊಂಡು ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅದರೆ ಈವರೆಗೆ ಹುಲಿಯ ಸುಳಿವು ಸಿಕ್ಕಿಲ್ಲ. ಇಲಾಖೆ ಮೇಲಾಧಿಕಾರಿಗಳು ಬಂದು ಪರಿಶೀಲಿಸಿದ್ದಾರೆ. ಕಾರ್ಯಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು.
ಬಿ ಮಟಕರೆ ಗ್ರಾಪಂ ಸದಸ್ಯ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, ಕೂಡಗಿಯಲ್ಲಿ ಹುಲಿ ದಾಳಿಗೆ ರೈತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಭಾಗದ ರೈತರ‌್ಯಾರು ಜಮೀನು ಹತ್ತಿರಕ್ಕೆ ಹೋಗುತ್ತಿಲ್ಲ. ಶಾಸಕರು ಹೇಳಿದ ದಿನದಿಂದ ಕೂಡಗಿ ಮತ್ತು ಕುರ್ಣೇಗಾಲ ಗ್ರಾಮದ ಕುಟುಂಬಗಳಿಗೆ ಅರಣ್ಯ ಇಲಾಖೆ ಆಹಾರ ಕಿಟ್ ನೀಡುತ್ತಿದೆ. ಆದಷ್ಟು ಶೀಘ್ರದಲ್ಲಿ ಹುಲಿ ಸೆರೆಯಿಡಿದು ರೈತರು ಜಮೀನುಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಜತೆಗೆ ಕಾಡಂಚಿನ ಜಮೀನುಗಳಲ್ಲಿ ಬೆಳೆ ಕಟಾವು ಮಾಡಿಕೊಂಡು ತರಲು ಸಿಬ್ಬಂದಿ ನೇಮಿಸಿ ರೈತರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸಿದ್ದು, ಸುರೇಶ್, ಕೃಷ್ಣ ಇತರರು ಇದ್ದರು.