ಜಗತ್ತಿನಲ್ಲಿ ಶೇ.10 ರಷ್ಟು ಜನರಿಗೆ ಲಿವರ್ ಸಮಸ್ಯೆ : ಡಾ.ಮಹೇಶ್ ಗೋಪಶೆಟ್ಟಿ

ಮೈಸೂರು ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಯಕೃತ್ತು ದಿನಾಚರಣೆ ಕಾರ್ಯಕ್ರಮವನ್ನು ಅಂಗಾಂಗ ಕಸಿ ಶಸ್ತ್ರಚಿಕಿತ್ಸಕ ಡಾ.ಮಹೇಶ್ ಗೋಪಶೆಟ್ಟಿ ಉದ್ಘಾಟಿಸಿದರು. ಡಾ.ಎಚ್. ಬಸವನಗೌಡಪ್ಪ,  ಡಾ.ಸಿ.ಪಿ.ಮಧು,  ಡಾ.ಡಿ. ನಾರಾಯಣಪ್ಪ,  ಡಾ.ಎಂ.ಸಿ. ಪ್ರಸಾದ್ ಹಾಗೂ ಇತರರು ಇದ್ದರು.
ಮೈಸೂರು ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಯಕೃತ್ತು ದಿನಾಚರಣೆ ಕಾರ್ಯಕ್ರಮವನ್ನು ಅಂಗಾಂಗ ಕಸಿ ಶಸ್ತ್ರಚಿಕಿತ್ಸಕ ಡಾ.ಮಹೇಶ್ ಗೋಪಶೆಟ್ಟಿ ಉದ್ಘಾಟಿಸಿದರು. ಡಾ.ಎಚ್. ಬಸವನಗೌಡಪ್ಪ, ಡಾ.ಸಿ.ಪಿ.ಮಧು, ಡಾ.ಡಿ. ನಾರಾಯಣಪ್ಪ, ಡಾ.ಎಂ.ಸಿ. ಪ್ರಸಾದ್ ಹಾಗೂ ಇತರರು ಇದ್ದರು.
Published on
ಮೈಸೂರು: ಆರೋಗ್ಯಕರ ಯಕೃತ್ತಿಗಾಗಿ ಮದ್ಯಪಾನ ತ್ಯಜಿಸಿ, ನಿಯಮಿತ ಆಹಾರ ಸೇವನೆ ಮತ್ತು ವ್ಯಾಯಾಮ ರೂಢಿಸಿಕೊಳ್ಳಬೇಕು ಎಂದು ಅಂಗಾಂಗ ಕಸಿ ಶಸ್ತ್ರಚಿಕಿತ್ಸಕ ಡಾ.ಮಹೇಶ್ ಗೋಪಶೆಟ್ಟಿ ಹೇಳಿದರು.
ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಯಕೃತ್ತು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಶೇ.10 ರಷ್ಟು ಜನರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅತಿಯಾದ ಮದ್ಯಪಾನ, ಆಹಾರ ಸೇವನೆ ಹಾಗೂ ಮಧುಮೇಹ ಕಾಯಿಲೆಯು ಕೂಡ ಯಕೃತ್ತ್ ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆ ಹಾಗೂ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಹೇಳಿದರು.
ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿ ಕುಲಪತಿ ಡಾ.ಎಚ್. ಬಸವನಗೌಡಪ್ಪ ಮಾತನಾಡಿ, ವಿಶ್ವ ಯಕೃತ್ತು ದಿನಾಚರಣೆಯ ಉದ್ದೇಶ ಜನರಲ್ಲಿ ಯಕೃತ್ತು ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವುದು. ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಸೇವನೆ ಮತ್ತು ಸಕ್ಕರೆ ಕಾಯಿಲೆಯಿಂದ ಪ್ರಪಂಚದಲ್ಲಿ ಸುಮಾರು 20 ಲಕ್ಷ ಜನರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಜನರು ದುಶ್ಚಟಗಳಿಂದ ದೂರವಿರಬೇಕು. ಸೋಂಕಿನಿಂದ ರಕ್ಷಿಸಿಕೊಳ್ಳಲು ಹೆಪಟೈಟಿಸ್ ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಜೆಎಸ್‌ಎಸ್ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಪಿ.ಮಧು ಮಾತನಾಡಿ, ಲಿವರ್ ಮಾನವ ದೇಹದ ಪ್ರಮುಖ ಅಂಗವಾಗಿದ್ದು, ಇದರ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕ. ಆದ್ದರಿಂದ ರೋಗದ ಗುಣಲಕ್ಷಣಗಳನ್ನು ಗುರುತಿಸಿ ಅದಕ್ಕೆ ಸರಿಯಾದ ಚಿಕಿತ್ಸೆ ಮತ್ತು ಔಷಧಗಳನ್ನು ತೆಗೆದುಕೊಳ್ಳಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಡಿ. ನಾರಾಯಣಪ್ಪ, ಆಸ್ಪತ್ರೆಯ ಉಪವೈದ್ಯಕೀಯ ಅಧೀಕ್ಷಕ ಡಾ.ಎಂ.ಸಿ. ಪ್ರಸಾದ್, ಸ್ಥಾನೀಯ ವೈದ್ಯಾಧಿಕಾರಿ ಡಾ.ಶಾಂತಮಲ್ಲಪ್ಪ, ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ದೀಪಕ್‌ಸುವರ್ಣ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಮಹೇಶ್‌ಶೆಟ್ಟಿ, ಡಾ.ಎಚ್.ವಿ. ಆರಾಧ್ಯ, ಡಾ. ಸುನೀಲ್ ಕುಮಾರ್, ಡಾ. ಶರಣ್ಯ ಎ.ವಾಸು ಹಾಗೂ ಇನ್ನಿತರರು ಉಪಸ್ಥಿರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net