ಕೆಪಿಎಸ್ ಆಂಗ್ಲ ಮಾಧ್ಯಮಕ್ಕೆ ಶೇ.100 ಫಲಿತಾಂಶ

ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪಿರಿಯಾಪಟ್ಣಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ  ವಿದ್ಯಾರ್ಥಿಗಳನ್ನು ಶಾಲಾ ಉಪಪ್ರಾಂಶುಪಾಲರು ಹಾಗೂ ಶಿಕ್ಷಕರು ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪಿರಿಯಾಪಟ್ಣಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಉಪಪ್ರಾಂಶುಪಾಲರು ಹಾಗೂ ಶಿಕ್ಷಕರು ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
Published on
ರಾವಂದೂರು: ಪಿರಿಯಾಪಟ್ಟಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 86 ಫಲಿತಾಂಶ ದೊರೆತಿದ್ದು, ಆಂಗ್ಲ ಮಾಧ್ಯಮದಲ್ಲಿ ಶೇ.100ರಷ್ಟು ಫಲಿತಾಂಶ ಲಭಿಸಿದೆ.
ಆಂಗ್ಲ ಮಾಧ್ಯಮದಲ್ಲಿ 32 ವಿದ್ಯಾರ್ಥಿಗಳಿದ್ದು, ಇದರಲ್ಲಿ 32 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. ಶಾಲೆಯಲ್ಲಿ ಒಟ್ಟು 169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 145 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ ಉತ್ತಮ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 50 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಇದರಲ್ಲಿ ಆಂಗ್ಲ ಮಾಧ್ಯಮದ ಆರ್.ಕೆ.ಕೃತಿಕ್ ರಾಜ್(562), ನಂದಿತಾ (546), ಸಿಂಚನಾ (533), ಕನ್ನಡ ಮಾಧ್ಯಮದಲ್ಲಿ ಮಹಾದೇವಿ 506 ಅಂಕಗಳನ್ನು ಪಡೆದಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ 137 ವಿದ್ಯಾರ್ಥಿಗಳಲ್ಲಿ 113 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳನ್ನು ಹಾಗೂ ಇದಕ್ಕೆ ಕಾರಣರಾದ ಶಿಕ್ಷಕರನ್ನು ಉಪ ಪ್ರಾಂಶುಪಾಲ ಸುರೇಶ್ ಅಭಿನಂದಿಸಿದರು. ಅಲ್ಲದೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ಎಸ್.ಚಿಕ್ಕವೀರಪ್ಪ, ಸದಸ್ಯರಾದ ರಾಜೇಂದ್ರ , ಜಲೇಂದ್ರ, ಸುರೇಶ್, ಶಿಕ್ಷಕರಾದ ಶಿವಪ್ಪ, ಪ್ರಣಿತ್, ಪುಟ್ಟರಾಜ್ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net