ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ನಾಯ್ಡುನಗರದಲ್ಲಿ ಗುರುವಾರ ರಾತ್ರಿ ದಿಢೀರ್ ದಾಳಿ ನಡೆಸಿದ ಸಿಸಿಬಿ ಪೊಲೀಸರು 176 ಗ್ರಾಂ ಹೈಡ್ರೋ ಗಾಂಜಾ ವಶ ಪಡೆಸಿಕೊಂಡಿದ್ದಾರೆ. ಹೈಡ್ರೋ ಗಾಂಜಾ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಈ ಸಂಬಂಧ 1989ರ ಎನ್‌ಡಿಪಿಎಸ್ ಕಾಯ್ದೆ ಅಡಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.